ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೆಳ್ಳಂಬೆಳಿಗ್ಗೆ ರಸ್ತೆಗಿಳಿದ ಡಿಸಿ, ಪಾಲಿಕೆ ಆಯುಕ್ತ: ಕಾರಣ ಏನು ಗೊತ್ತಾ?

ಧಾರವಾಡ: ಹುಬ್ಬಳ್ಳಿ, ಧಾರವಾಡದ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸುವ ದೃಷ್ಟಿಯಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಹಾಗೂ ಜಂಟಿ ಆಯುಕ್ತ ಮಾಧವ ಗಿತ್ತೆ ಅವರು ಜಂಟಿಯಾಗಿ ಮಂಗಳವಾರ ಬೆಳ್ಳಂಬೆಳಿಗ್ಗೆ ಧಾರವಾಡ ಸಿಟಿ ರೌಂಡ್ ಹಾಕಿದ್ದಾರೆ.

ಸೈಕಲ್ ಸವಾರಿ ಮಾಡಿದ ಮೂವರೂ ಅಧಿಕಾರಿಗಳು, ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕರನ್ನು ಭೇಟಿ ಮಾಡಿ ಅವರ ಕುಂದು ಕೊರತೆಗಳನ್ನು ಆಲಿಸಿದರು.

ಆಜಾದ್ ಪಾರ್ಕ್, ಸೂಪರ್ ಮಾರುಕಟ್ಟೆ ಸೇರಿದಂತೆ ಅನೇಕ ಕಡೆಗಳಲ್ಲಿ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ ಸವಿದರು.

ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಈ ಕಾರ್ಯ ಹಮ್ಮಿಕೊಂಡಿದ್ದರು. ಪೌರ ಕಾರ್ಮಿಕರೊಂದಿಗೆ ಚಹಾ ಸವಿದು ಅವರ ಕಾರ್ಯಕ್ಕೆ ಪ್ರೋತ್ಸಾಹ ನೀಡಿದರು.

Edited By : Shivu K
Kshetra Samachara

Kshetra Samachara

25/01/2022 12:13 pm

Cinque Terre

24.09 K

Cinque Terre

1

ಸಂಬಂಧಿತ ಸುದ್ದಿ