ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಮತದಾರರ ಪಾತ್ರ ಬಹಳ ಮುಖ್ಯ- ತಹಶೀಲ್ದಾರ ಪ್ರಕಾಶ್ ನಾಶಿ

ಹುಬ್ಬಳ್ಳಿ: ಭಾರತ ಚುನಾವಣಾ ಆಯೋಗವು 1959 ಜ.25ರಂದು ಸ್ಥಾಪನೆಯಾದ ಹಿನ್ನೆಲೆಯಲ್ಲಿ 2011ರಿಂದ ಪ್ರತಿ ವರ್ಷ ಜ.25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ "ಬಲವಾದ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ" ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಮತದಾರರ ಪಾತ್ರ ಪ್ರಮುಖವಾದದ್ದು ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಹೇಳಿದರು.

ಹುಬ್ಬಳ್ಳಿಯ ಮಿನಿವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 1951ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಸಾರ್ವತ್ರಿಕ ಚುನಾವಣೆ ನಡೆಸಲಾಯಿತು. ಲೋಕಸಭೆ, ವಿಧಾನಸಭೆ, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿಗಳ ಚುನಾವಣೆಯಲ್ಲಿ ಜನರು ಹಾಕುವ ಮತದಿಂದ ಅಭ್ಯರ್ಥಿಯ ಭವಿಷ್ಯ ನಿರ್ಧಾರವಾಗುತ್ತದೆ. ಜನರು ಹಾಕುವ ಒಂದು ಮತವೂ ಕೂಡ ಪ್ರಾಮುಖ್ಯತೆಯನ್ನು ಪಡೆದಿದೆ. ಮತದಾನದಿಂದ ತಮ್ಮನ್ನು ಆಳುವ ನಾಯಕರನ್ನು ಆಯ್ಕೆ ಮಾಡಲು ಇರುವ ಅವಕಾಶವಾಗಿದೆ ಎಂದರು.

ಹೊಸ ಮತದಾರರನ್ನು ಸೇರ್ಪಡೆ ಹಾಗೂ ಮತದಾರರ ಸಂಖ್ಯೆ ಹೆಚ್ಚಳ ಮಾಡುವ ದಿಸೆಯಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಹೊಸ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಜನರು ಮತದಾನ ಮಾಡಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಬಹುದು. ಯಾವುದೇ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು.

Edited By : Nagaraj Tulugeri
Kshetra Samachara

Kshetra Samachara

25/01/2022 05:03 pm

Cinque Terre

32.74 K

Cinque Terre

1

ಸಂಬಂಧಿತ ಸುದ್ದಿ