ಹುಬ್ಬಳ್ಳಿ: ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಜನವರಿ 30ರಂದು ಹುಬ್ಬಳ್ಳಿ ಮತ್ತು ಧಾರವಾಡ ಪಾಲಿಕೆ ವ್ಯಾಪ್ತಿಯ ಎಲ್ಲ ವಧಾಲಯ, ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.
ಒಂದು ವೇಳ ಆದೇಶ ಮೀರಿ ಮಾಂಸದ ಅಂಗಡಿಗಳನ್ನು ತೆಗೆದರೆ ಪಾಲಿಕೆಯಿಂದ ಲೈಸೆನ್ಸ್ ರದ್ದುಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
26/01/2022 10:53 am