ನವಲಗುಂದ: ಪಟ್ಟಣದ ಆನೆಗುಂದಿ ಪ್ಲಾಟ್‌ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಸಾಯಿ ಬಾಬಾ ದೇವಸ್ಥಾನ ನಿರ್ಮಾಣ ಕಾಮಗಾರಿ ಮತ್ತು ಕಾಂಪೌಂಡ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕಾಮಗಾರಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವೀರಶೈವ ಲಿಂಗಾಯತ ಸಮುದಾಯ ಭವನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಈ ವೇಳೆ ನವಲಗುಂದ ತಾಲೂಕಾ ಬಿಜೆಪಿ ಅಧ್ಯಕ್ಷರಾದ ಎಸ್.ಬಿ ದಾನಪ್ಪಗೌಡರ, ಮುಖಂಡರಾದ ಸುಭಾಷ ಗಾಳಪ್ಪನವರ, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/02/2022 09:58 pm