ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗ್ರಾಮೀಣ ಪೊಲೀಸ್ ವಾಹನಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ

ಹುಬ್ಬಳ್ಳಿ: ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನಗಳನ್ನು ನೀಡಲಾಗುವುದು. ಇಲಾಖೆಗಳು ತಮಗೆ ಬೇಡಿಕೆಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷ ಶಾಸಕರಿಗೆ ನೀಡಲಾಗುವ 2 ಕೋಟಿ ರೂ. ಅನುದಾನದಲ್ಲಿ ರಸ್ತೆ, ಕಟ್ಟಡ, ವಾಹನಗಳು, ಆಂಬ್ಯುಲೆನ್ಸ್ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯಗಳಿಗೆ ಉಪಯುಕ್ತ ರೀತಿಯಲ್ಲಿ ಬಳಕೆಯಾಗಬೇಕು. ಪೊಲೀಸ್ ಇಲಾಖೆಗೆ ಹಳೆಯ ವಾಹನಗಳಿಗೆ ಬದಲಾಗಿ ಹೊಸ ವಾಹನಗಳನ್ನು ನೀಡಲಾಗಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮೀಣ ಪೊಲೀಸ್ ಠಾಣೆಗೆ ವಾಹನಗಳು ಅವಶ್ಯವಾಗಿದ್ದವು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್, ಡಿವೈಎಸ್ಪಿ ಎಂ‌.ಬಿ. ಸಂಕದ, ಪೊಲೀಸ್ ಇನ್ಸ್ ಪೆಕ್ಟರ್ ರಮೇಶ ಗೋಕಾಕ, ಜಿ.ಸಿ. ಡೂಗನವರ, ರವಿಚಂದ್ರ ಡಿ.ಬಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಇದ್ದರು.

Edited By : Shivu K
Kshetra Samachara

Kshetra Samachara

11/02/2022 01:10 pm

Cinque Terre

33.76 K

Cinque Terre

0

ಸಂಬಂಧಿತ ಸುದ್ದಿ