ಹುಬ್ಬಳ್ಳಿ: ಹಿಜಾಬ್ ಪ್ರಕರಣದ ಕುರಿತು ಹೈಕೋರ್ಟ್ ತೀರ್ಪು ಹೊರ ಬಿದ್ದಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಡಳಿತದಿಂದ ಹಾಗೂ ಹು-ಧಾ ಪೊಲೀಸ್ ಕಮೀಷನರೇಟ್ ವತಿಯಿಂದ ಸಾಕಷ್ಟು ಬಿಗಿ ಬಂದೋಬಸ್ತ್ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರಾದ ಲಾಭುರಾಮ್ ಅವರು ಸಿಟಿ ರೌಂಡ್ ಮೂಲಕ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಹಭಾಗಿತ್ವದಲ್ಲಿ ರ್‍ಯಾಲಿ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಇನ್ನೂ ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಸೇರಿದಂತೆ ಆಯಕಟ್ಟಿನ ಪ್ರದೇಶಗಳಿಗೆ ಪೊಲೀಸ್ ಆಯುಕ್ತರು ಭೇಟಿ ನೀಡಿ ಅಹಿತಕರ ಘಟನೆಗಳು ನಡೆಯದಂತೆ ಸೂಚನೆ ನೀಡಿದರು.
Kshetra Samachara
15/03/2022 04:27 pm