ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿರ್ಮಾಣ ಹಂತದ ಸಮುದಾಯ ಭವನ ಹಾಗೂ ಬಾಲಭವನ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

ಹುಬ್ಬಳ್ಳಿ: ಹುಬ್ಬಳ್ಳಿ ಘಂಟೆಕೇರಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ಹಾಗೂ ಬಾಲ ಭವನ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಇಂದು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನೆಡೆಸಿದರು.

ಸಮಾಜ ಕಲ್ಯಾಣ ಇಲಾಖೆಯ ಅನುದಾನ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಕಾಮಗಾರಿಗೆ ಈಗಾಗಲೆ1.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಅಂತಿಮ‌ ಹಂತದಲ್ಲಿದ್ದು ಉಳಿದ ಮೊತ್ತವನ್ನು ಸಹ ಶೀಘ್ರವಾಗಿ ಪಾವತಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರೂ. 4.25 ಕೋಟಿ ವೆಚ್ಚದಲ್ಲಿ ಬಾಲಭವನ ನಿರ್ಮಿಸಲಾಗುತ್ತಿದೆ.

ಎರಡು ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಉದ್ಘಾಟನೆಗೆ ಅನುವು ಮಾಡಿಕೊಡಬೇಕು. ಉತ್ತಮ ಗುಣಮಟ್ಟದ ಕಾಮಗಾರಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

15/03/2022 07:57 pm

Cinque Terre

7.63 K

Cinque Terre

1

ಸಂಬಂಧಿತ ಸುದ್ದಿ