ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಂವಿಧಾನದ ಆಶಯವನ್ನು ಎಲ್ಲರೂ ಅರಿಯಿರಿ: ಆಯುಕ್ತ ಡಾ.ಗೋಪಾಲಕೃಷ್ಣ ಬಿ

ಹುಬ್ಬಳ್ಳಿ: ಸಂವಿಧಾನದಿಂದ ಉತ್ತಮ ಜೀವನ ಹಾಗೂ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಾಗಿದೆ. ಡಾ.ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಂದು ಪ್ರತಿ ವಲಯ ಕಚೇರಿಯ ಇಬ್ಬರೂ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ ಹೇಳಿದರು.

ಹುಬ್ಬಳ್ಳಿಯ ಪಾಲಿಕೆ ಸಭಾಂಗಣದಲ್ಲಿ ಇಂದು ಏಪ್ರಿಲ್ 5 ರಂದು ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂರವರ 115ನೇ ಜಯಂತಿ ಹಾಗೂ ಏಪ್ರೀಲ್ 14 ರಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 131ನೇ ಜಯಂತಿ ಆಚರಣೆಯ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಸ್ಥಳೀಯ ಕಲಾ ತಂಡಗಳಿಂದ ಕ್ರಾಂತಿ ಗೀತೆ, ಜಗ್ಗಲಿಗೆ, ಕರಡಿ ಮಜಲುಗಳಿಗೆ ಮೆರವಣಿಗೆಯಲ್ಲಿ ಅವಕಾಶ ನೀಡಲಾಗುವುದು. ಪಾಲಿಕೆ ವಲಯ ಕಚೇರಿಗಳಿಂದ ಒಂದೊಂದು ಸ್ತಬ್ಧ ಚಿತ್ರದ ಮೂಲಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಅತೀ ಹೆಚ್ಚು ಅಂಕ ಪಡೆದ 5 ಜನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಮೆರವಣಿಗೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತದೆ. ಸರ್ಕಾರದ ಶಿಷ್ಟಾಚಾರದಂತೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

Edited By : Nagaraj Tulugeri
Kshetra Samachara

Kshetra Samachara

30/03/2022 09:40 pm

Cinque Terre

8.26 K

Cinque Terre

0

ಸಂಬಂಧಿತ ಸುದ್ದಿ