ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ತಹಶೀಲ್ದಾರ್ ನಡೆ ಹಳ್ಳಿಯ ಕಡೆ

ಅಣ್ಣಿಗೇರಿ: ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಇಂದು ತಹಶೀಲ್ದಾರ್ ನಡೆ ಹಳ್ಳಿಯ ಕಡೆ 'ಗ್ರಾಮ ವಾಸ್ತವ್ಯ' ಕಾರ್ಯಕ್ರಮ ಜರುಗಿತು. ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಕಿತ್ತೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಯಿತು.

ಗ್ರಾಮದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮದ ಎಲ್ಲ ಓಣಿಯ ಸಿಸಿ ರೋಡ್, ಶಾಲೆಯನ್ನು ಬೇರೆ ಕಡೆ ಸ್ಥಳಾಂತರಿಸುವುದು, ಚಕ್ಕಡಿ ರಸ್ತೆಗಳನ್ನು ದುರಸ್ತಿ ಮಾಡಿಸುವುದು, ಸಮುದಾಯ ಭವನ ನಿರ್ಮಾಣ, ಆರಾಧನ ಯೋಜನೆಯಡಿ ದೇವಸ್ಥಾನಗಳನ್ನು ದುರಸ್ತಿ ಮಾಡುವುದು ಹೀಗೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಮಾಡಿಸಬೇಕೆಂದು ನಿರ್ಣಯ ಆಗಿರುತ್ತದೆ ಎಂದು ತಾಲೂಕು ದಂಡಾಧಿಕಾರಿ ಮಂಜುನಾಥ್ ಅಮಾಸೆ ತಿಳಿಸಿದ್ದಾರೆ.

ಇನ್ನೂ ಒಂದಿಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಗುತ್ತಿದ್ದು, ಕೆಲವು ಸಮಸ್ಯೆಗಳಿಗೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ತಿಳಿಸಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದು ತಾಲೂಕು ತಹಶೀಲ್ದಾರ್ ಮಂಜುನಾಥ್ ಅಮಾಸೆ ಹೇಳಿದ್ದಾರೆ.

ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By :
Kshetra Samachara

Kshetra Samachara

16/04/2022 08:52 pm

Cinque Terre

8.12 K

Cinque Terre

1

ಸಂಬಂಧಿತ ಸುದ್ದಿ