ಧಾರವಾಡ/ಬೆಳಗಾವಿ: ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ್ ಪಾಟೀಲ ಅವರನ್ನು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದೆ.
ಕಳೆದ ಎರಡು ವರ್ಷಗಳ ಅವಧಿಗೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ ನಿತೇಶ್ ಪಾಟೀಲ ಅವರು, ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯಲ್ಲಿ ಎಲ್ಲೂ ಆಕ್ಸಿಜನ್ ಕೊರತೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದ್ದು, ಬೆಳಗಾವಿಯ ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ನಿತೇಶ್ ಪಾಟೀಲ ಅವರಿಗೆ ಅಧಿಕಾರ ವಹಿಸಿ ಶುಭ ಹಾರೈಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2022 06:18 pm