ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈಲ್ವೆ ಇಲಾಖೆಯ ನೇತೃತ್ವದಲ್ಲಿ ಕಸ ವಿಂಗಡಣೆ ಸಭೆ: ಪ್ರಾಥಮಿಕ ಹಂತದಲ್ಲಿಯೇ ಕಸ ವಿಂಗಡಿಸಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ನಿತ್ಯ ಉತ್ಪತ್ತಿಯಾಗುವ ಒಣಕಸ ಹಾಗೂ ಹಸಿಕಸವನ್ನು ಪ್ರಾಥಮಿಕ ಹಂತದಲ್ಲಿಯೇ ವಿಂಗಡಿಸಿ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಘನತ್ಯಾಜ್ಯ, ಕಟ್ಟಡ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿಯಮಗಳು -2016ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ನೈರುತ್ಯ ರೈಲ್ವೆ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಡ್ಡಾಯವಾಗಿ ಕಸ ವಿಂಗಡಣೆ ಮಾಡಿ, ಹಸಿ ಕಸವನ್ನು ಕಾಂಪೋಸ್ಟ್ ಮಾಡಬೇಕು. ಒಣ ಕಸವನ್ನು ಪುನರ್ ವಿಂಗಡಿಸಿ ಮರು ಬಳಕೆದಾರರಿಗೆ ನೀಡಬೇಕು’ ಎಂದರು.

ಹೆಚ್ಚಿನ ತ್ಯಾಜ್ಯ ಉತ್ಪಾದಿಸುವವರು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಅಪಾಯಕಾರಿ ಹಾಗೂ ವೈದ್ಯಕೀಯ ತ್ಯಾಜ್ಯ ಸೇರಿದಂತೆ ಎಲ್ಲ ಮಾದರಿಯ ತ್ಯಾಜ್ಯವನ್ನು ಪ್ರಾಥಮಿಕ ಹಂತದಲ್ಲೇ ವಿಂಗಡಣೆ ಮಾಡಬೇಕು. ವಿಲೇವಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು’ ಎಂದು ಸಲಹೆ ನೀಡಿದರು.

ರೈಲ್ವೆ ಅಧಿಕಾರಿಗಳೊಂದಿಗೆ ಸಭೆ: ‘ರೈಲು ನಿಲ್ದಾಣ ಹಾಗೂ ಹಳಿಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿದ್ದು, ಇದನ್ನು ತಡೆಯಲು ಯೋಜನೆ ರೂಪಿಸಬೇಕು’ ಎಂದು ಸುಭಾಷ್ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

10/05/2022 01:58 pm

Cinque Terre

9.66 K

Cinque Terre

0

ಸಂಬಂಧಿತ ಸುದ್ದಿ