ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಭೂಮಿ ಯೋಜನೆ ಅನುಷ್ಠಾನ; ರಾಜ್ಯಕ್ಕೆ ನವಲಗುಂದ ಪ್ರಥಮ

ನವಲಗುಂದ : ಭೂಮಿ ಯೋಜನೆಯಡಿ 2022ರ ಏಪ್ರೀಲ್ ತಿಂಗಳಿನಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡಿದ ನವಲಗುಂದ ತಾಲೂಕು ರಾಜ್ಯಕ್ಕೆ ಪ್ರಥಮ ಹಾಗೂ ಹುಬ್ಬಳ್ಳಿ ಗ್ರಾಮೀಣ ತಾಲೂಕು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ.

ನವಲಗುಂದ ತಾಲೂಕಿನಲ್ಲಿ ಭೂಮಿ ಯೋಜನೆಯಡಿ 2022ರ ಏಪ್ರೀಲ್ ತಿಂಗಳಿನಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡಿ, 4.72 ಸಿಗ್ಮಾ ಮೌಲ್ಯ ಹಾಗೂ 4.257 ರಷ್ಟು ವಿಲೇವಾರಿ ಸೂಚ್ಯಂಕವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. ಈ ಹಿನ್ನೆಲೆ ಭೂ ಮಾಪನ ಇಲಾಖೆ ಆಯುಕ್ತ ಹಾಗೂ ಭೂಮಿ ಮತ್ತು ಯುಪಿಓಆರ್ ಪದನಿಮಿತ್ತ ನಿರ್ದೇಶಕರಾದ ಮುನೀಶ್ ಮೌದ್ಗೀಲ್ ಅವರು ಅಭಿನಂದಿಸಿದ್ದಾರೆ.

ಈ ಸಾಧನೆಗೆ ನವಲಗುಂದ ತಹಶೀಲ್ದಾರ ಅನಿಲ ಬಡಿಗೇರ ಮತ್ತು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಸೇರಿದಂತೆ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯತತ್ಪರತೆ ಕಾರಣವಾಗಿದೆ. ಬರುವ ದಿನಗಳಲ್ಲಿಯೂ ಇದೇ ಉತ್ಸಾಹ ಕಾಪಾಡಿಕೊಂಡು ಮುನ್ನಡೆಯಬೇಕು ಎಂದು ಮುನೀಶ್ ಮೌದ್ಗಿಲ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

09/06/2022 05:37 pm

Cinque Terre

6.14 K

Cinque Terre

1

ಸಂಬಂಧಿತ ಸುದ್ದಿ