ಧಾರವಾಡ: ಅಟಲ್ ಜಿ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ವಿಲೇವಾರಿ ಮಾಡಿದ ಧಾರವಾಡ ಜಿಲ್ಲೆಯು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದೆ. ಜಿಲ್ಲೆಯ ಈ ಸಾಧನೆಗೆ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕಿ ಗಂಗೂಬಾಯಿ ರಮೇಶ್ ಮಾನಕರ ಅಭಿನಂದಿಸಿದ್ದಾರೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಪತ್ರ ಬರೆದಿರುವ ಅವರು, ಧಾರವಾಡ ಜಿಲ್ಲೆಯ ನಾಡಕಚೇರಿಗಳಲ್ಲಿ 2022ರ ಮೇ ತಿಂಗಳಲ್ಲಿ 19, 179 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.99 ರಷ್ಟು ವಿಲೇವಾರಿ ಮಾಡಲಾಗಿದೆ. 7.76 ಸಿಗ್ಮಾ ಮೌಲ್ಯ ಹಾಗೂ 7.4 ವಿಲೇವಾರಿ ಸೂಚ್ಯಂಕದ ಪ್ರಕಾರ ಜಿಲ್ಲೆಯಲ್ಲಿ 8.4 ಪಟ್ಟು ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಧನೆಗೈದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಸಾಧನೆಗೆ ನಾಡಕಚೇರಿ, ಅಟಲ್ ಜಿ ಜನಸ್ನೇಹಿ ಕೇಂದ್ರದ ಅಧಿಕಾರಿ ಹಾಗೂ ಸಿಬ್ಬಂದಿ ಸಹಕಾರ, ಕಾರ್ಯತತ್ಪರತೆ ಕಾರಣವಾಗಿದೆ. ಮುಂಬರುವ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯಲ್ಲಿ ಮುನ್ನೆಡಯಬೇಕು ಎಂದು ಗಂಗೂಬಾಯಿ ರಮೇಶ್ ಮಾನಕರ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಭೂಮಿ ಯೋಜನೆಯಲ್ಲಿ ಜಿಲ್ಲೆ ಪ್ರಥಮ: ಭೂಮಿ ಯೋಜನೆ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆಯು ಸತತವಾಗಿ ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿಯೇ ಮೊದಲ ಶ್ರೇಯಾಂಕದಲ್ಲಿದೆ. 3.04 ಸಿಗ್ಮಾ ಸ್ಥಾನದಲ್ಲಿ ಜಿಲ್ಲೆ ಇದೆ. ಬೆಳಗಾವಿ ಹಾಗೂ ಚಿತ್ರದುರ್ಗ ಜಿಲ್ಲೆಗಳು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.
Kshetra Samachara
09/06/2022 07:39 pm