ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ

ನವಲಗುಂದ : ಸೋಮವಾರ ನವಲಗುಂದ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ತಾಲೂಕಾ ಅಧಿಕಾರಿಗಳು ಭಾಗಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.

ಇನ್ನು ಸಭೆಯಲ್ಲಿ ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಪಂಚಾಯತ ರಾಜ್ ಇಂಜಿನೀಯರ್ ಉಪವಿಭಾಗದ ಇಲಾಖೆಯಲ್ಲಿರುವ ಪಂಚಾಯ್ತಿ ಕಟ್ಟಡಗಳ ಕಾಮಗಾರಿಗಳು ವಿಳಂಬವಾಗುತ್ತಿದೆ ಬೇಗನೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಸಿದರು. ಕೆಲವು ಕಡೆ ಕರೆಂಟ್ ಸೌಲಭ್ಯವಿಲ್ಲದೆ ಸಮಸ್ಯೆಯಾಗುತ್ತಿದೆ. ಪರಿಹರಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಕಾಮಗಾರಿಗಳನ್ನು ಪೂರ್ಣಗೊಳಿಸದೆ ಇರುವ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಅವರ ಮೇಲೆ ಸರಕಾರದ ನಿಯಮಾನುಸಾರ ಕ್ರಮಕೈಗೊಳ್ಳಿ ಹಾಗೂ ಬ್ಲಾಕ್ ಲಿಸ್ಟಿಗೆ ಹಾಕಿ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ನೂತನ ದಾಖಲೆ ನಿರ್ಮಿಸವಲ್ಲಿ ನಮ್ಮ ನವಲಗುಂದ ತಾಲೂಕು ಮುಂದೆ ಇದ್ದು, 265 ಶಾಲಾ ಕೊಠಡಿಗಳ ಶೇ 80ರಷ್ಟು ನಿರ್ಮಾಣ ಹಂತದಲ್ಲಿದ್ದು, ಶೀಘ್ರವೇ ಉದ್ಘಾಟನೆಗೊಳ್ಳಲಿವೆ ಎಂದರು.

ತಾಲೂಕಿನ ಹಳ್ಳಿಗಳಲ್ಲಿ ರುದ್ರಭೂಮಿ ಸಮಸ್ಯೆ ಇದ್ದು, ಈಗಾಗಲೇ ಕೆಲವು ಹಳ್ಳಿಗಳಲ್ಲಿ ಭೂಮಿ ಖರೀದಿಸಲಾಗಿದೆ. ಉಳಿದ ಕಡೆ ಅವಶ್ಯಇರುವಲ್ಲಿ ಕ್ರಮಕೈಗೊಳ್ಳಲಾಗುವುದು. ಅದರೊಂದಿಗೆ ಪಟ್ಟಣದಲ್ಲಿ ಪಶು ಆಸ್ಪತ್ರೆಗೆ ನೂತನ ಜಾಗ ಗುರುತಿಸಿ, ಹೊಸ ಆಸ್ಪತ್ರೆ ನಿರ್ಮಿಸಲಾಗುವುದು ಹಾಗೂ ಹೆಚ್ಚಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನ ನೇಮಿಸಿಲಾಗುವುದು ಎಂದು ತಿಳಿಸಿದರು.

ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ 5 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿಗೆ ಜವಳಿ ಪಾರ್ಕ್ ನಿರ್ಮಾಣಕ್ಕೆ ಶೀಘ್ರದಲ್ಲಿ ಭೂಮಿ ಪೂಜೆ ಮಾಡಲಾಗುವುದು ಎಂದು ಸಹ ತಿಳಿಸಿದರು. ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಜನತೆಗೆ ಕುಡಿಯಿವ ನೀರಗಾಗಿ ಉದ್ಘಾಟಣೆ ಹಂತಕ್ಕೆ ಬಂದಿದೆ ಎಂದು ಹೇಳಿದರು.

ರೈತರ ಅನುಕೂಲತೆಗಾಗಿ ಹೊಲದ ರಸ್ತೆಗಳು ಹಾಳಾಗಿದ್ದು ರಸ್ತೆ ಸುಧಾರಣೆಗಾಗಿ ಸುಮಾರು 45 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. 26 ಸ್ಲಮ್ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಲಾಗಿದೆ. ತಾಲೂಕಿನಲ್ಲಿ ಮಳೆ, ಬೆಳೆ ಉತ್ತಮವಾಗಿದೆ. ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆ ಇಲ್ಲಾ. ಕೃಷಿ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿ, ತಾಲೂಕಿನಲ್ಲಿ ಶೇ.82ರಷ್ಟು ಬಿತ್ತನೆ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ವತಿಯಿಂದ ನಡೆದ ಅಭಿವೃದ್ಧಿ ಕಾರ್ಯಗಳ ಪ್ರಗತಿಯ ಕುರಿತು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/06/2022 10:49 pm

Cinque Terre

6.7 K

Cinque Terre

0

ಸಂಬಂಧಿತ ಸುದ್ದಿ