ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

ಧಾರವಾಡ: ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಧಾರವಾಡದ ಹಿರಿಯ ಲೇಖಕರಾದ ಡಾ.ಗುರುಲಿಂಗ ಕಾಪಸೆ ಅವರು ಭಾಜನರಾಗಿದ್ದಾರೆ.

ಡಾ.ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ.ಸ.ಖಾಂಡೇಕರ್ ಅವರ 'ಒಂದು ಪುಟದ ಕಥೆ'ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿದೆ. 'ಒಂದು ಪುಟದ ಕಥೆ' (ಮೂಲದಲ್ಲಿ 'ಏಕಾ ಪಾನಾಚಿ ಗೋಷ್ಠ)ಯು ಖಾಂಡೇಕರ್ ಅವರ ಆತ್ಮಕಥೆಯಾಗಿದೆ.

ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ 'ಯಯಾತಿ ' ಎಂಬ ಕೃತಿಗೆ ಜ್ಞಾನಪೀಠ ಪ್ರಶಸ್ತಿಯು ಬಂದಿತ್ತು. ಡಾ.ಕಾಪಸೆಯವರು ಅನುವಾದಿಸಿದ ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ, ಜಾತೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ.

Edited By : Vijay Kumar
Kshetra Samachara

Kshetra Samachara

24/06/2022 07:40 pm

Cinque Terre

10.73 K

Cinque Terre

0

ಸಂಬಂಧಿತ ಸುದ್ದಿ