ಧಾರವಾಡ: ಜುಲೈ 10 ರಂದು ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಗ್ರಾಮೀಣ ಜಿಲ್ಲೆಯಾದ್ಯಂತ ಜುಲೈ 9 ರ ರಾತ್ರಿ 11:59 ಗಂಟೆಯಿಂದ ಜುಲೈ 11 ರ ಬೆಳಗಿನ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲಾಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶ ಜಾರಿ ಇರುವ ಸಮಯದಲ್ಲಿ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಿರತಕ್ಕದ್ದು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‌ಪೆಕ್ಟರ್, ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (2) ರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಮತ್ತು ಆರಕ್ಷಕ ಅಧೀಕ್ಷಕರು ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನಿರ್ದೇಶಿಸಿದ್ದಾರೆ.
Kshetra Samachara
05/07/2022 03:56 pm