ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಆಗಸ್ಟ್ 11 ರಿಂದ 17 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ!

ಧಾರವಾಡ: ದೇಶದಾದ್ಯಂತ ಭಾರತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು "ಹರ್ ಘರ್ ತಿರಂಗಾ" ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ 11 ರಿಂದ 17 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲ ನಾಗರಿಕರು ಈ ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ ಜರುಗಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಇತರೆ ಎಲ್ಲ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಅವರ ಕುಟುಂಬ ವರ್ಗದವರು ಸೇರಿದಂತೆ ಎಲ್ಲರೂ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಆ ಮೂಲಕ ತಮ್ಮ ರಾಷ್ಟ್ರ ಪ್ರೇಮವನ್ನು ಮೆರೆಯಬೇಕೆಂದು ಅವರು ಹೇಳಿದರು.

ಗೃಹ ವ್ಯವಹಾರಗಳ ಮಂತ್ರಾಲಯವು ಧ್ವಜ ಸಂಹಿತೆ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಕೈಯಲ್ಲಿ ತಯಾರಿಸಿದ ರಾಷ್ಟ್ರೀಯ ಧ್ವಜ ಅಥವಾ ಯಂತ್ರದಿಂದ ತಯಾರಿಸಿದ ಪಾಲಿಸ್ಟರ್, ಹತ್ತಿ, ಉಣ್ಣೆ, ರೇಷ್ಮೆ, ಖಾದಿಬಟ್ಟೆಯಿಂದ ತಯಾರಿಸುವ ರಾಷ್ಟ್ರೀಯ ಧ್ವಜವನ್ನು ಹಾರಿಸಬಹುದಾಗಿದೆ. ರಾಷ್ಟ್ರೀಯ ಧ್ವಜದ ಅಳತೆಯು 20x30 ಅಥವಾ ಈ ಅಳತೆಯ ಅರ್ಧದಷ್ಟು ಸಹ ಆಗಿರಬಹುದೆಂದು ಕೇಂದ್ರ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಹರ್ ಘರ್ ತಿರಂಗಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ಕಾರ್ಯಕ್ರಮ ರೂಪಿಸಿದ್ದು, ತಮ್ಮ ತಮ್ಮ ಮನೆಯ ಮೇಲೆ ಅಥವಾ ಮನೆಯ ಅಂಗಳದಲ್ಲಿ ಕುಟುಂಬದೊಂದಿಗೆ ರಾಷ್ಟ್ರಧ್ವಜಾರೋಹಣ ಮಾಡುವಂತೆ ಪೋಷಕರಿಗೆ ತಿಳಿಸಲು ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರತಿದಿನ ಬೆಳಿಗ್ಗೆ ಜರುಗುವ ಪ್ರಾಥನಾ ಸಮಯದಲ್ಲಿ ಶಾಲಾ ಕಾಲೇಜುಗಳಿಂದ ಧ್ವಜಾರೋಹಣದ ಮಹತ್ವ ತಿಳಿಸಲು ಕ್ರಮವಹಿಸಬೇಕೆಂದು ಅವರು ತಿಳಿಸಿದರು.

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ ರಾಜ್ ಸಂಸ್ಥೆಗಳು ಸ್ವಸಹಾಯ ಸಂಘಗಳು, ಒಕ್ಕೂಟಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪಕೇಂದ್ರ, ಸಹಕಾರ ಸಂಘಗಳು ಉಪ ಅಂಚೆ ಕಚೇರಿಗಳಲ್ಲಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ರೋಜಗಾರ್ ಸೇವಕರು, ಶಿಕ್ಷಕರು ಸಾರ್ವಜನಿಕರನ್ನು ಉತ್ತೇಜಿಸಿ ಅಭಿಯಾನದಲ್ಲಿ ಎಲ್ಲರೂ ಸಕ್ರೀಯವಾಗಿ ಭಾಗವಹಿಸುವಂತೆ ಕ್ರಮವಹಿಸಬೇಕು.

ರಾಷ್ಟ್ರ ಧ್ವಜಗಳ ಹಂಚಿಕೆ ಮತ್ತು ಮಾರಾಟ ಮಾಡುವ ಸ್ಥಳಗಳನ್ನು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತ ಮತ್ತು ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಗುರುತಿಸಬೇಕು. ನ್ಯಾಯಬೆಲೆ ಅಂಗಡಿಗಳನ್ನು ಸಹ ಧ್ವಜಗಳ ವಿತರಣೆ, ಮಾರಾಟದ ಕೇಂದ್ರವಾಗಿ ಉಪಯೋಗಿಸಿಕೊಳ್ಳಬಹುದು. ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳು ಹರ್ ಘರ್ ತಿರಂಗಾ ಅಭಿಯಾನ ಕುರಿತುನ ಕೈಗೊಂಡ ಕ್ರಮದ ಬಗ್ಗೆ ಛಾಯಾಚಿತ್ರ ಸಹಿತ ಅನುಪಾಲನಾ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್.ಆರ್. ಪುರುಷೋತ್ತಮ ಅವರನ್ನು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ಮತ್ತು ಪ್ರಾದೇಶಿಕ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

Edited By :
Kshetra Samachara

Kshetra Samachara

15/07/2022 02:30 pm

Cinque Terre

9.89 K

Cinque Terre

1

ಸಂಬಂಧಿತ ಸುದ್ದಿ