ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಕಲಚೇತನರ ಸೌಲಭ್ಯ: ತ್ವರಿತ ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ: ವಿಕಲಚೇತನರನ್ನು ಕಚೇರಿಗೆ ಅಲೆದಾಡಿಸದೇ, ಸರ್ಕಾರದ ವಿವಿಧ ಯೋಜನೆಗಳಡಿ ಸಿಗುವ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಕಲಚೇತನರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಕಲಚೇತನರಿಗೆ ಯೋಜನೆಗಳ ಕುರಿತು ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತಿ ಹಾಗೂ ಸರ್ಕಾರದ ಕಚೇರಿಗಳಲ್ಲಿ ವಿಕಲಚೇತನರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಫಲಕ ಹಾಕಲು ಸೂಚಿಸಿದರು.

ಜಿಲ್ಲಾ-ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ, ಶಿಕ್ಷಣ ಮತ್ತು ವಿಕಲಚೇತನರ ಕಲ್ಯಾಣ ಇಲಾಖೆ ಜಂಟಿಯಾಗಿ ಯುಡಿಐಡಿ ಕಾರ್ಡು ವಿತರಣೆಗೆ ಸ್ವೀಕರಿಸಿ ಮತ್ತು ವಿಲೇವಾರಿ ಮಾಡಿದ ಅರ್ಜಿಗಳ ವಿವರಗಳನ್ನು ಒಂದು ವಾರದಲ್ಲಿ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.

Edited By : Nirmala Aralikatti
Kshetra Samachara

Kshetra Samachara

18/07/2022 05:37 pm

Cinque Terre

10.45 K

Cinque Terre

0

ಸಂಬಂಧಿತ ಸುದ್ದಿ