ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆ.8 ರಿಂದ 10 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಧಾರವಾಡ: ಆಗಸ್ಟ್ 9 ರಂದು ಮೊಹರಂ ಹಬ್ಬ ಆಚರಿಸುತ್ತಿರುವುದರಿಂದ ಮೊಹರಂ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಆಗಸ್ಟ್ 8 ರ ಸಂಜೆ 6 ಗಂಟೆಯಿಂದ ಆಗಸ್ಟ್ 10 ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಗ್ರಾಮೀಣ ವ್ಯಾಪ್ತಿಯಲ್ಲಿನ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀಯರ್ ಬಾರಗಳು, ಕ್ಲಬ್‍ಗಳು, ಮತ್ತು ಮದ್ಯದ ಡಿಪೊಗಳನ್ನು ನಿಷೇದಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಬೇಕು. ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್‌ಸ್ಪೆಪೆಕ್ಟರರು ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು ಅವಶ್ಯಕತೆ ಕಂಡು ಬಂದಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶಿಸಿದ್ದಾರೆ.

ಧಾರವಾಡ ಜಿಲ್ಲೆಯ ಆರಕ್ಷಕ ಅಧೀಕ್ಷಕರು, ಉಪ ಆರಕ್ಷಕ ಅಧೀಕ್ಷಕರು, ಅಬಕಾರಿ ಉಪ ಆಯುಕ್ತರು ಹಾಗೂ ಹೆಚ್ಚುವರಿ ಅಬಕಾರಿ ಅಧೀಕ್ಷಕರು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

05/08/2022 08:06 pm

Cinque Terre

10.96 K

Cinque Terre

0

ಸಂಬಂಧಿತ ಸುದ್ದಿ