ಧಾರವಾಡ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ಅಂಗನವಾಡಿ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಪ್ರತಿದಿನ ಬೆಳಿಗ್ಗೆ 8 ಕ್ಕೆ ಧ್ವಜಾರೋಹಣ ಮಾಡಿ, ಸೂರ್ಯಸ್ತದ ವೇಳೆಗೆ ಇಳಿಸಬೇಕು. ಧಾರವಾಡ ಜಿಲ್ಲೆಯಾದ್ಯಂತ ಖಾಸಗಿ ಮನೆಗಳಲ್ಲಿ ಮಾತ್ರ ಆಗಸ್ಟ್ 13 ರಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ ಹಗಲು, ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆಗಸ್ಟ್ 15 ರ ಸಂಜೆ ಸೂರ್ಯಾಸ್ಥದ ವೇಳೆಗೆ ಇಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಈ ಮೊದಲು ನೀಡಿದ ಸೂಚನೆಯಲ್ಲಿ, ಆಗಸ್ಟ್ 13 ರಿಂದ 15 ರವರೆಗೆ ನಿರಂತರವಾಗಿ ಧ್ವಜ ಹಾರಿಸಲು ತಿಳಿಸಲಾಗಿತ್ತು. ಇಂದು ಆಗಸ್ಟ್ 8 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ವೀಡಿಯೋ ಸಂವಾದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶದನ್ವಯ ಈ ಆದೇಶದಲ್ಲಿ ಪರಿಷ್ಕರಣೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.
Kshetra Samachara
08/08/2022 07:47 pm