ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಿಓಪಿ ಗಣಪತಿ ಬೇಡ: ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಮೈಕ್ ಬಳಕೆಗೆ ಅನುಮತಿ

ಧಾರವಾಡ: ಧಾರವಾಡ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳು 5 ಅಡಿವರೆಗೆ ಮಾತ್ರ ಎತ್ತರ ಇರಬಹುದು. ಪಿಓಪಿ ಗಣಪತಿ ಮೂರ್ತಿಗಳನ್ನು ನಿಷೇಧಿಸಿದೆ. ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ಯ ಹುಬ್ಬಳ್ಳಿ, ಧಾರವಾಡ ಗಣೇಶೋತ್ಸವ ಸಮಿತಿ ಮಹಾಮಂಡಳಗಳ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು.

ಗಣೇಶ ಚತುರ್ಥಿಯಂದು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಸ್ಥಾಪನೆಗೆ ಸರ್ಕಾರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗದರ್ಶಿಸೂತ್ರಗಳನ್ನು ನೀಡಿದೆ. ಪಿಓಪಿ ಗಣಪತಿ ಮೂರ್ತಿಗಳ ಸ್ಥಾಪನೆಗೆ ಸರ್ಕಾರ 2016 ರಲ್ಲಿ ನಿರ್ಬಂಧಿಸಿ ಆದೇಶಿಸಿದೆ. ಆದೇಶ ಉಲ್ಲಂಘಿಸಿ ಪಿಓಪಿ ಗಣಪತಿ ಸ್ಥಾಪಿಸಿದರೆ ಮತ್ತು ಜಲಮೂಲಗಳಲ್ಲಿ ವಿಸರ್ಜಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ 10 ಸಾವಿರ ರೂಪಾಯಿ ದಂಡ ಮತ್ತು ಜೈಲುವಾಸ ವಿಧಿಸಬಹುದಾಗಿದೆ.

ಅವಳಿ ನಗರ ಹಾಗೂ ಜಿಲ್ಲೆಯ ಯಾವುದೇ ಸ್ಥಳದಲ್ಲಿ ಪಿಓಪಿ ಗಣೇಶ ವಿಗ್ರಹಗಳ ದಾಸ್ತಾನು, ಮಾರಾಟ ಕಂಡುಬಂದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಹಾಯವಾಣಿ ಹಾಗೂ ಮಹಾನಗರ ಪಾಲಿಕೆ ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಬಹುದು. ಅಧಿಕಾರಿಗಳ ತಂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತದೆ. ಮತ್ತು ದಾಸ್ತಾನು ಹೊಂದಿರುವ ಪಿಓಪಿ ವಿಗ್ರಹಗಳನ್ನು ಜಪ್ತಿ ಮಾಡಿ, ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಹಬ್ಬ ಆಚರಿಸಬೇಕೆಂದು ಜಿಲ್ಲಾಧಿಕಾರಿ ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಸ್ಥಾಪನೆಗೆ ಸಮಿತಿಯವರು ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಶೀಘ್ರವಾಗಿ ಅನುಮತಿ ಪಡೆಯಲು ಮಹಾನಗರ ಪಾಲಿಕೆ ಹಾಗೂ ನಗರ ಪ್ರದೇಶಗಳಲ್ಲಿ ಏಕಗವಾಕ್ಷಿ (ಸಿಂಗಲ್ ವಿಂಡೋ) ಮೂಲಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಗಣೇಶೋತ್ಸವದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಬಟ್ಟೆ ಬ್ಯಾನರ್‌ಗಳನ್ನು ಮಾತ್ರ ಬಳಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮಾತನಾಡಿ, ಡಿಜೆ ಬಳಕೆಗೆ ಅವಕಾಶವಿಲ್ಲ. ಈ ಕುರಿತು ಸಮಿತಿಯವರು ಸಹಕಾರ ನೀಡಬೇಕು ಎಂದರು.

Edited By : Nagaraj Tulugeri
Kshetra Samachara

Kshetra Samachara

18/08/2022 04:35 pm

Cinque Terre

22.66 K

Cinque Terre

4

ಸಂಬಂಧಿತ ಸುದ್ದಿ