ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣೇಶ ವಿಸರ್ಜನಾ ದಿನದಂದು ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ವಿಗ್ರಹಗಳ ವಿಸರ್ಜನಾ ಸಮಾರಂಭದ ದಿನಗಳಂದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1) ನೇದ್ದರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಧಾರವಾಡ ಜಿಲ್ಲೆಯಲ್ಲಿ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೋರಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಗಣೇಶ ವಿಗ್ರಹ ವಿಸರ್ಜನಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿಸಲು ಅನುಕೂಲವಾಗುವಂತೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

1ನೇ ದಿನ: ಆಗಸ್ಟ್ 30 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 01 ರ ಬೆಳಿಗ್ಗೆ 06 ಗಂಟೆಯವರೆಗೆ,

3ನೇ ದಿನ: ಸೆಪ್ಟೆಂಬರ್ 01 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 03 ರ ಬೆಳಿಗ್ಗೆ 06 ಗಂಟೆಯವರೆಗೆ, 5ನೇ ದಿನ: ಸೆಪ್ಟೆಂಬರ್ 03 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 05 ರ ಬೆಳಿಗ್ಗೆ 6 ಗಂಟೆಯವರೆಗೆ,

7ನೇ ದಿನ: ಸೆಪ್ಟೆಂಬರ್ 05 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 07 ರ ಬೆಳಿಗ್ಗೆ 6 ಗಂಟೆಯವರೆಗೆ,

9ನೇ ದಿನ: ಸೆಪ್ಟೆಂಬರ್ 07 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 09 ರ ಬೆಳಿಗ್ಗೆ 6 ಗಂಟೆಯವರೆಗೆ,

11ನೇ ದಿನ: ಸೆಪ್ಟೆಂಬರ್ 09 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 11 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ.

ಆದೇಶದಲ್ಲಿ ತಿಳಿಸಿರುವ ದಿನಾಂಕಗಳಂದು ಮತ್ತು ನಿಗದಿಪಡಿಸಿದ ಸಮಯದಲ್ಲಿ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಾರ, ಕ್ಲಬ್‍ಗಳು ಮತ್ತು ಮದ್ಯದ ಡಿಪೊಗಳು ಮುಚ್ಚತಕ್ಕದ್ದು. ಇದಲ್ಲದೇ ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ವಲಯ ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಉಪವಿಭಾಗದ ಅಬಕಾರಿ ಅಧೀಕ್ಷಕರು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (2) ರ ನೇದ್ದರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/08/2022 08:48 pm

Cinque Terre

11.94 K

Cinque Terre

0

ಸಂಬಂಧಿತ ಸುದ್ದಿ