ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪೌರಕಾರ್ಮಿಕರ ಅಭಿವೃದ್ಧಿಗೆ ಮೀಸಲಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಡಿಸಿ

ಧಾರವಾಡ: ಪೌರಕಾರ್ಮಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ ಅಧಿಕಾರಿಗಳು ಪೌರಕಾಮಿರ್ಕರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜರುಗಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ-2013 ಸೆಕ್ಷನ್ 24ರನ್ವಯ ತ್ರೈಮಾಸಿಕ ಜಿಲ್ಲಾ ಜಾಗೃತಿ ಸಮತಿ ಸಭೆ ಜರುಗಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇಲಾಖೆಗಳ ಹಾಗೂ ನಿಗಮಗಳ ಅಧಿಕಾರಿಗಳ ಮುತುವರ್ಜಿಯಿಂದ ಯೋಜನೆಗಳನ್ನು ಪೌರಕಾರ್ಮಿಕರಿಗೆ, ಸಫಾಯಿ ಕರ್ಮಚಾರಿಗಳಿಗೆ ತಲುಪಿಸಬೇಕು. ಅವರಿಗೆ ವಸತಿ, ಆರ್ಥಿಕ ಮತ್ತು ಅವರ ಕುಟುಂಬ ಸದಸ್ಯರಿಗೆ ಶೈಕ್ಷಣಿಕ ಸೌಲಭ್ಯಗಳನ್ನು ನೀಡಬೇಕು.

ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೌರಕಾರ್ಮಿಕರಿಗೆ ಪ್ರತಿ ದಿನ ಉತ್ತಮ ಗುಣಮಟ್ಟದ ಉಪಹಾರ, ಊಟ ಸೀಗುವಂತೆ ಕ್ರಮವಹಿಸಬೇಕು. ಕಾಲ ಕಾಲಕ್ಕೆ ಅವರ ಆರೋಗ್ಯ ತಪಾಸಣೆ, ಔಷಧಿ ಪೂರೈಕೆಗೆ ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿವಿಧ ಇಲಾಖೆಗಳು ಪಟ್ಟಿ ಮಾಡಿದ ಫಲಾನುಭವಿಗಳಿಗೆ ಸ್ವ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕ್‌ನವರು ಸಕಾಲಕ್ಕೆ ಸಾಲ ಸೌಲಭ್ಯ ನೀಡಬೇಕು. ಸಣ್ಣಪುಟ್ಟ ಕೊರತೆಗಳ ಕಾರಣ ನೀಡಿ ಸತಾಯಿಸಬಾರದು ಎಂದರು. ಈ ಕುರಿತು ಲೀಡ್ ಬ್ಯಾಂಕ್ ಅಗತ್ಯ ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ ಅಂತಹ ಬ್ಯಾಂಕ್ ಗಳ ಪಟ್ಟಿ ಮಾಡಿ, ಸೂಕ್ತ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರಿಗೆ ಕೆಲಸದ ನಂತರ ವಿಶ್ರಾಂತಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯಗಳನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Edited By : Abhishek Kamoji
Kshetra Samachara

Kshetra Samachara

22/09/2022 04:52 pm

Cinque Terre

89.5 K

Cinque Terre

0

ಸಂಬಂಧಿತ ಸುದ್ದಿ