ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮು-2022 ರ ಸಾಲಿನಲ್ಲಿ ಅತಿವೃಷ್ಠಿಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು.
ಅದರಂತೆ ಸೆಪ್ಟೆಂಬರ್ 28 ರಂದು ಮೂರನೇ ಹಂತದಲ್ಲಿ 15,608 ರೈತ ಫಲಾನುಭವಿಗಳಿಗೆ ಒಟ್ಟು 27 ಕೋಟಿ 27 ಲಕ್ಷ ರೂಪಾಯಿಗಳನ್ನು ನೇರವಾಗಿ ರೈತರ ಉಳಿತಾಯ ಖಾತೆಗಳಿಗೆ ಜಮಾ ಮಾಡಲಾಗಿದೆ ಮತ್ತು ಪರಿಹಾರ ಎಂಟ್ರಿ ಕಾರ್ಯವು ಪ್ರಗತಿಯಲ್ಲಿದ್ದು ಹಂತ ಹಂತವಾಗಿ ರೈತರಿಗೆ ಪರಿಹಾರ ದೊರಕಲಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
28/09/2022 06:16 pm