ಧಾರವಾಡ: ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ.ಬಿ.ಸಿ.ಕರಿಗೌಡರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಾ.ಬಿ.ಸಿ.ಕರಿಗೌಡರ ಅವರು, ತಮ್ಮ ಕೆಳ ವರ್ಗದ ಸಿಬ್ಬಂದಿಗೆ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿ ಇತರ ಸಿಬ್ಬಂದಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿರಬಹುದು ಎಂದು ಊಹಿಸಲಾಗಿದೆ.
ಸದ್ಯ ಕರಿಗೌಡರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನರಗುಂದ ತಾಲೂಕಾ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ.ಶಶಿ ಪಾಟೀಲ ಅವರನ್ನು ನೇಮಕ ಮಾಡಲಾಗಿದ್ದು, ಡಾ.ಶಶಿ ಅವರು ಧಾರವಾಡದ ನೂತನ ಡಿಎಚ್‌ಓ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಡಾ.ಬಿ.ಸಿ.ಕರಿಗೌಡರ ಅವರನ್ನು ನರಗುಂದ ತಾಲೂಕಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
Kshetra Samachara
01/10/2022 08:18 pm