ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ನೈಋತ್ಯ ರೈಲ್ವೆ ವಲಯ ಒಂದಿಲ್ಲೊಂದು ರೀತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮನುಕುಲಕ್ಕೆ ಮಾರಕ ಎಂಬುವಂತ ಜನಜಾಗೃತಿ ಮೂಡಿಸಲು ಹೊಸ ಚಿಂತನೆಗೆ ಮುಂದಾಗಿದೆ.
ಹೌದು... ಹುಬ್ಬಳ್ಳಿಯ ನೈಋತ್ಯ ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟೆಲ್ ಮೂಲಕ ಡೈನೋಸಾರ್ ಚಿತ್ರಣ ನಿರ್ಮಾಣ ಮಾಡಿದ್ದು, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣದ ಸಂದೇಶವನ್ನು ಸಾರುತ್ತಿದ್ದು, ಕಸದಲ್ಲಿಯೇ ಕಲಾಕೃತಿ ಮಾಡಿರುವ ಕಾರ್ಯಕ್ಕೆ ಜನರ ಪ್ರಶಂಸೆ ವ್ಯಕ್ತವಾಗಿದೆ.
ಇನ್ನೂ ನೀರು ಕುಡಿದು ಎಲ್ಲೆಂದರಲ್ಲಿ ಎಸೆದ ಬಾಟಲ್ ಮೂಲಕ ಸಾಕಷ್ಟು ಪರಿಸರ ಹಾನಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.
ಹಾಗೇ ಸಾಕಷ್ಟು ಜನದಟ್ಟಣೆಯ ನಿಲ್ದಾಣಗಳಲ್ಲಿ ಒಂದಾಗಿರುವ ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರೈಲ್ವೆ ನಿಲ್ದಾಣದ ಮುಖ್ಯ ದ್ವಾರದಲ್ಲಿ ಇಂತಹದೊಂದು ಕಲಾಕೃತಿಗಳನ್ನು ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/10/2022 04:09 pm