ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆಯಿಂದ ಅ.6ರವರೆಗೆ ಅಳ್ನಾವರ ತಾಲೂಕಿನಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿದ ಡಿಸಿ

ಧಾರವಾಡ: ದಸರಾ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಅಕ್ಟೋಬರ್ 4 ರಂದು ರಾತ್ರಿ 11:59 ಗಂಟೆಯಿಂದ ಅಕ್ಟೋಬರ್ 6 ರ ಬೆಳಗಿನ 6 ಗಂಟೆಯವರೆಗೆ ಅಳ್ನಾವರ ತಾಲೂಕಿನಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆದೇಶ ನೀಡಿರುವ ಅವರು, ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ್ ಬಾರ್‌ಗಳು, ಕ್ಲಬ್‌ಗಳು ಮತ್ತು ಮದ್ಯದ ಡಿಪೊಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಠಿಯಿಂದ ವಲಯ ಅಬಕಾರಿ ಇನ್‌ಸ್ಪೆಕ್ಟರರು ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕ ಅವರು, ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21 (2) ರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರು, ಅಬಕಾರಿ ಆರಕ್ಷಕ ಅಧೀಕ್ಷಕರು ಹಾಗೂ ಹೆಚ್ಚುವರಿ ಅಬಕಾರಿ ಅಧೀಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/10/2022 08:16 pm

Cinque Terre

9.84 K

Cinque Terre

0

ಸಂಬಂಧಿತ ಸುದ್ದಿ