ಧಾರವಾಡ: ಧಾರವಾಡದ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗಿದ್ದು, ಮೇಲ್ದರ್ಜೆಗೇರಿದ ರೈಲು ನಿಲ್ದಾಣವನ್ನು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಲೋಕಾರ್ಪಣೆಗೊಳಿಸಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಧಾರವಾಡದ ರೈಲು ನಿಲ್ದಾಣಕ್ಕೆ ಬಂದ ರೈಲ್ವೆ ಸಚಿವ ಅಶ್ವಿನ್ ಅವರಿಗೆ ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಹ್ಲಾದ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಅರವಿಂದ ಬೆಲ್ಲದ, ಮೇಯರ್ ಈರೇಶ ಅಂಚಟಗೇರಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಸೇರಿದಂತೆ ಅನೇಕರು ಸಾಥ್ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/10/2022 01:50 pm