ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೂತನ ಮುಖ್ಯಮಂತ್ರಿ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಈಶ್ವರಗೌಡ.ಬ.ಪಾಟೀಲ

ಭಾರತೀಯ ಜನತಾ ಪಕ್ಷದಲ್ಲಿ ಜನಪರ ಕಾಳಜಿಯೊಂದಿಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿಯವರು ರಾಜ್ಯದ ಗೃಹ ಸಚಿವರಾಗಿ ಈಗ ಮತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ.

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡು, ನಾಡಿನ ಹೊಸ ಸಾರಥಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು.

ನಿಮ್ಮ ಅಭಿವೃದ್ಧಿ ಪರ ನಿಲುವು ಹಾಗೂ ಪಕ್ಷ ಸಂಘಟನೆ ಬಗ್ಗೆ ನಿಮಗಿರುವ ಬದ್ಧತೆಗೆ ದೊರೆತ ಈ ಸ್ಥಾನವು ಮುಂದಿನ ದಿನಗಳಲ್ಲಿ ನಿಮಗೆ ಇನ್ನೂ ಹೆಚ್ಚಿನ ಯಶಸ್ಸು ನೀಡಲೆಂದು ಪ್ರಾರ್ಥಿಸುತ್ತೇವೆ. ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ಉತ್ತರ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದಿರುವ ನಿಮಗೆ ಮತ್ತೊಮ್ಮೆ ಅಭಿನಂದನೆ.

ಅಭಿನಂದನೆ ಸಲ್ಲಿಸುವವರು:

ಈಶ್ವರಗೌಡ. ಬ.ಪಾಟೀಲ

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು ಹಾಗೂ ವಾರ್ಡ್ 40ರ ಮುಖಂಡರು ಹುಬ್ಬಳ್ಳಿ.

Edited By : Shivu K
Kshetra Samachara

Kshetra Samachara

28/07/2021 02:40 pm

Cinque Terre

8.47 K

Cinque Terre

0