ಇಲ್ಲಿ ನಡೆಯಲಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಹುಬ್ಬಳ್ಳಿ ನಗರ ಸಂಪೂರ್ಣ ಸಜ್ಜಾಗಿದೆ. ಡೆನಿಸನ್ಸ್ ಹೋಟೆಲ್‌ನಲ್ಲಿ ಡಿ.28 ಹಾಗೂ 29 ರಂದು ನಡೆಯುವ ಕಾರ್ಯಕಾರಿಣಿಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕಾರಿಣಿ ಸಭೆಗೆ ಬಿಜೆಪಿಯ ಹಿರಿಯ ಮುಖಂಡರು ಸೇರಿದಂತೆ ಮುಖ್ಯಮಂತ್ರಿಗಳು, ಸಚಿವರು ಸಹ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕಾರಿಣಿಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಭೆಯಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಸಂಬಂಧ ಚರ್ಚೆಗಳು ನಡೆಯಲಿವೆ.
ಸರ್ವರಿಗೂ ಸ್ವಾಗತ ಕೋರಲಾಗಿದೆ
Kshetra Samachara
28/12/2021 09:01 am