ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂ.30 ರಂದು ಸಾಲುಮರದ ತಿಮ್ಮಕ್ಕನವರ 111 ನೇ ಜನ್ಮದಿನಾಚರಣೆ

ಹುಬ್ಬಳ್ಳಿ: ಭಾರತೀಯ ಅಯ್ಯಪ್ಪ ಸೇವಾ ಸಂಘದ ವತಿಯಿಂದ ಇದೇ ಜೂ.30 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿನ ಡಾ:ಅಂಬೇಡ್ಕರ್ ಭವನದಲ್ಲಿ ಸಾಲುಮರದ ತಿಮ್ಮಕ್ಕ ರವರ 111 ನೇ ಜನ್ಮದಿನದ ಸಂಭ್ರಮಾಚರಣೆ ಹಮ್ಮಿಕೋಳ್ಳಲಾಗಿದೆ ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯಾದ್ಯಂತ ಸಾವಿರಾರು ಪರಿಸರ ಪ್ರೇಮಿಗಳು ಈ ಹುಟ್ಟು ಹಬ್ಬ ಆಚರಣೆಗೆ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಭಾಗವಹಿಸಬಹುದು ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯಿಂದ 300 ಕ್ಕೂ ಹೆಚ್ಚು ಜನ ತಮ್ಮ ಸ್ವಂತ ಖರ್ಚಿನಿಂದ ಈ ಕಾರ್ಯಕ್ರಮಕ್ಕೆ ಹೊಗುತ್ತಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ವಿನಂತಿಸಿಕೊಂಡರು.

Edited By : Somashekar
Kshetra Samachara

Kshetra Samachara

28/06/2022 01:27 pm

Cinque Terre

28.37 K

Cinque Terre

0