ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1168 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 104925 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 223 ಜನರ ವರದಿ ನೆಗೆಟಿವ್ ಬಂದಿದೆ. 130 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 267 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 104925 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 102128 ಜನರ ವರದಿ ನೆಗೆಟಿವ್ ಎಂದು ಬಂದಿದೆ. 15888 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 13358 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 464 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2066 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 106390 ಜನರ ಮೇಲೆ ನಿಗಾ ಇಡಲಾಗಿದ್ದು, 9419 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 23778 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 71127 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
21/09/2020 08:54 pm