ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1769 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 103456 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 394 ಜನರ ವರದಿ ನೆಗೆಟಿವ್ ಬಂದಿದೆ. 264 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 695
ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 103456 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 100200 ಜನರ ವರದಿ ನೆಗೆಟಿವ್ ಎಂದು ಬಂದಿದೆ. 15458 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 12897 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 451 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2110 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 104921 ಜನರ ಮೇಲೆ ನಿಗಾ ಇಡಲಾಗಿದ್ದು, 11746 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 21259 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 69806 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
19/09/2020 08:09 pm