ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 305 ಪಾಸಿಟಿವ್, 205 ನೆಗೆಟಿವ್, 6 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 301 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ.

ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 103757 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 205 ಜನರ ವರದಿ ನೆಗೆಟಿವ್ ಬಂದಿದೆ. 305 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 490 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 103757 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 100622 ಜನರ ವರದಿ ನೆಗೆಟಿವ್ ಎಂದು ಬಂದಿದೆ.

15759 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 13114 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

457 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2188 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 105222 ಜನರ ಮೇಲೆ ನಿಗಾ ಇಡಲಾಗಿದ್ದು, 9740 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

22714 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 70580 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

20/09/2020 08:00 pm

Cinque Terre

69.35 K

Cinque Terre

4

ಸಂಬಂಧಿತ ಸುದ್ದಿ