ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1111 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ.
ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 138807 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 1111 ಜನರ ವರದಿ ನೆಗೆಟಿವ್ ಬಂದಿದೆ. 136 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 204 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 138807 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 136443 ಜನರ ವರದಿ ನೆಗೆಟಿವ್ ಎಂದು ಬಂದಿದೆ.
19155 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 16995 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
526 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1632 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 140272 ಜನರ ಮೇಲೆ ನಿಗಾ ಇಡಲಾಗಿದ್ದು, 16632 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
16162 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 105846 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
14/10/2020 09:19 pm