ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1,614 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಈ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,40,421ಕ್ಕೆ ಏರಿಕೆಯಾಗಿದೆ.
ಬುಧವಾರ ಕಳುಹಿಸಿದ ಮಾದರಿ ಪೈಕಿ 333 ಜನರ ವರದಿ ನೆಗೆಟಿವ್ ಬಂದಿದೆ. 164 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 537 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,40,421 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,37,814 ಜನರ ವರದಿ ನೆಗೆಟಿವ್ ಎಂದು ಬಂದಿದೆ. 19,319 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 17,249 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 528 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1,542 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1,41,886 ಜನರ ಮೇಲೆ ನಿಗಾ ಇಡಲಾಗಿದ್ದು, 16,999 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 16,462 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,06,883 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
15/10/2020 08:50 pm