ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 135 ಪಾಸಿಟಿವ್, 107 ನೆಗೆಟಿವ್, 2 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 135 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 142143 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 107 ಜನರ ವರದಿ ನೆಗೆಟಿವ್ ಬಂದಿದೆ. 135 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 220 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 142143 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 140343 ಜನರ ವರದಿ ನೆಗೆಟಿವ್ ಎಂದು ಬಂದಿದೆ.

19790 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 17940 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 536 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1314 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 143878 ಜನರ ಮೇಲೆ ನಿಗಾ ಇಡಲಾಗಿದ್ದು, 14196 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

19006 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 109362 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

18/10/2020 09:36 pm

Cinque Terre

46.13 K

Cinque Terre

0

ಸಂಬಂಧಿತ ಸುದ್ದಿ