ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 3338 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 145481 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 1113 ಜನರ ವರದಿ ನೆಗೆಟಿವ್ ಬಂದಿದೆ. 84 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1333 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 145481 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 142437 ಜನರ ವರದಿ ನೆಗೆಟಿವ್ ಎಂದು ಬಂದಿದೆ. 19874 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18163 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 538 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1173 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 146954 ಜನರ ಮೇಲೆ ನಿಗಾ ಇಡಲಾಗಿದ್ದು, 14791 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 20242 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 110748 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
19/10/2020 09:01 pm