ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 443 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 145924 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 994 ಜನರ ವರದಿ ನೆಗೆಟಿವ್ ಬಂದಿದೆ. 104 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 339 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 145924 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 143964 ಜನರ ವರದಿ ನೆಗೆಟಿವ್ ಎಂದು ಬಂದಿದೆ. 19978 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18357 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 539 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1082 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 147397 ಜನರ ಮೇಲೆ ನಿಗಾ ಇಡಲಾಗಿದ್ದು, 13621 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 20773 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 111921 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
20/10/2020 09:37 pm