ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 134 ಪಾಸಿಟಿವ್, 53 ನೆಗೆಟಿವ್, 2 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1635 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 147559 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 53 ಜನರ ವರದಿ ನೆಗೆಟಿವ್ ಬಂದಿದೆ. 134 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 286 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 147559 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 145633 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20112 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18472 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 541 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1099 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 149032 ಜನರ ಮೇಲೆ ನಿಗಾ ಇಡಲಾಗಿದ್ದು, 12812 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 22453 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 112668 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

21/10/2020 11:24 pm

Cinque Terre

31.98 K

Cinque Terre

0

ಸಂಬಂಧಿತ ಸುದ್ದಿ