ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1247 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 148806 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 137 ಜನರ ವರದಿ ನೆಗೆಟಿವ್ ಬಂದಿದೆ. 133 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 149 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 148806 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 147040 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20245 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18628 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 544 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1073 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 150279 ಜನರ ಮೇಲೆ ನಿಗಾ ಇಡಲಾಗಿದ್ದು, 11541 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 24365 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 11330 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
22/10/2020 11:31 pm