ಹುಬ್ಬಳ್ಳಿ: ಹೆಮ್ಮಾರಿ ಕೊರೊನಾ ವಿರುದ್ಧ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹೋರಾಡುತ್ತಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವಾರಿಯರ್ಸ್ ಗಳಿಗೆ ಸೋಂಕು ದೃಢಪಡುತ್ತಿರುವುದು ಆತಂಕಕಾರಿ ವಿಚಾರವಾಗಿದೆ.
ಹೌದು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ 165ಕ್ಕೂ ಹೆಚ್ಚು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿದೆ. ಪರಿಣಾಮ ಸೋಂಕಿತರಿಗೆ ಚಿಕಿತ್ಸೆ ನೀಡಲು ಉಳಿದ ವೈದ್ಯರು ಹಿಂದೇಟು ಹಾಕುವಂತಾಗಿದೆ. ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ಈಗಾಗಲೇ 5 ಸಾವಿರಕ್ಕೂ ಅಧಿಕ ಸೋಂಕಿತರು ಚಿಕಿತ್ಸೆ ಪಡೆದಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ನೀಡಿದ್ದವರಿಗೆ ಸೋಂಕು ತಗುಲಿರುವುದು ವೈದ್ಯಕೀಯ ಸಿಬ್ಬಂದಿಯಲ್ಲೇ ಆತಂಕ ಹೆಚ್ಚಿಸಿದೆ.
Kshetra Samachara
23/10/2020 04:37 pm