ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1,401 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 150207 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 328 ಜನರ ವರದಿ ನೆಗೆಟಿವ್ ಬಂದಿದೆ. 92 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 477 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,50,207 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,48,163 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20,337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18,770 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 546 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1,021 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1,51,691 ಜನರ ಮೇಲೆ ನಿಗಾ ಇಡಲಾಗಿದ್ದು, 11,328 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 24,775 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,14,567 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
23/10/2020 07:30 pm