ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1840 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 152047 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 413 ಜನರ ವರದಿ ನೆಗೆಟಿವ್ ಬಂದಿದೆ. 93 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 890 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 152047 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 149600 ಜನರ ವರದಿ ನೆಗೆಟಿವ್ ಎಂದು ಬಂದಿದೆ.
20430 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18873 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
548 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1009 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 153511 ಜನರ ಮೇಲೆ ನಿಗಾ ಇಡಲಾಗಿದ್ದು, 12409 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
24651 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 115442 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
24/10/2020 07:36 pm