ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 65 ಪಾಸಿಟಿವ್, 129 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 221 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 15,2268 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 129 ಜನರ ವರದಿ ನೆಗೆಟಿವ್ ಬಂದಿದೆ. 65 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 761 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 1,52,268 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,49,948 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20495 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 18,936 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 551 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 1,011 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 1,53,752 ಜನರ ಮೇಲೆ ನಿಗಾ ಇಡಲಾಗಿದ್ದು, 10,514 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 25,077 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,17,150 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

25/10/2020 08:35 pm

Cinque Terre

49.46 K

Cinque Terre

0

ಸಂಬಂಧಿತ ಸುದ್ದಿ