ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 44 ಪಾಸಿಟಿವ್, 122 ನೆಗೆಟಿವ್, 3 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 2322 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 154590 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 122 ಜನರ ವರದಿ ನೆಗೆಟಿವ್ ಬಂದಿದೆ. 44 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 639 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 154590 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 152487 ಜನರ ವರದಿ ನೆಗೆಟಿವ್ ಎಂದು ಬಂದಿದೆ.

20539 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19075 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

551 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 913 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 156074 ಜನರ ಮೇಲೆ ನಿಗಾ ಇಡಲಾಗಿದ್ದು, 10742 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

25450 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 118969 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

26/10/2020 10:01 pm

Cinque Terre

51.59 K

Cinque Terre

1

ಸಂಬಂಧಿತ ಸುದ್ದಿ