ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 936 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 155526 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 390 ಜನರ ವರದಿ ನೆಗೆಟಿವ್ ಬಂದಿದೆ. 45 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 249 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 155526 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 153862 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20584 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19169ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 554 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 861 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 157043 ಜನರ ಮೇಲೆ ನಿಗಾ ಇಡಲಾಗಿದ್ದು, 10118 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 25398 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 120666 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
27/10/2020 10:44 pm