ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 829 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,56,355 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 87 ಜನರ ವರದಿ ನೆಗೆಟಿವ್ ಬಂದಿದೆ. 14 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 162 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,56,355 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,54,868 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20598 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19,273 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 556 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 769 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1,57,926 ಜನರ ಮೇಲೆ ನಿಗಾ ಇಡಲಾಗಿದ್ದು, 9,814 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 25,069 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,22,274 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
28/10/2020 09:28 pm