ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 857 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,57,212 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 247 ಜನರ ವರದಿ ನೆಗೆಟಿವ್ ಬಂದಿದೆ. 76 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 409 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,57,212 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,55,565 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20,674 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19,436 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 559 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 679 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1,58,783 ಜನರ ಮೇಲೆ ನಿಗಾ ಇಡಲಾಗಿದ್ದು, 9,567 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 24,926 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,23,611 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
29/10/2020 08:48 pm