ಹುಬ್ಬಳ್ಳಿ: ಪಲ್ಸ್ ಪೋಲಿಯೊ ಹಾಗೂ ಗ್ಲೋಬಲ್ ಹ್ಯಾಂಡ್ ವಾಷಿಂಗ್ ಡೇ ಅಂಗವಾಗಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ವತಿಯಿಂದ ಹೊಸೂರಿನ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ ನಂ.16ರಲ್ಲಿ ಮಕ್ಕಳಿಗೆ,ಶಿಕ್ಷಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ಕೊರೋನಾ ವೈರಸ್ ಬಗ್ಗೆ ಭಯ ಬೇಡ ಜಾಗೃತಿ ಇರಲಿ ಎಂಬುವ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,ಡಾ.ನಾಗರೇಖಾ ಹೆಬಸೂರು ಅವರು ಸಾರ್ವಜನಿಕರಲ್ಲಿ ಉಪನ್ಯಾಸದ ಮೂಲಕ ಜಾಗೃತಿ ಮೂಡಿಸಿದರು.
Kshetra Samachara
30/10/2020 02:07 pm